Saturday, December 6

Tag: Udayanews

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ. ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ. ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ. ಎಂದಿರುವ ಸಿದ್ದರಾಮಯ್ಯ, ಇತ್ತೀಚಿನ ಜನಸಂಖ್ಯೆಯ ಅನುಪ...
ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು, ಫೆಬ್ರವರಿ 12: ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ.. KWIN City to Become a Health City: Sharan Prakash Patil ಬೆಂಗಳೂರು ಅರಮನೆಯಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಇನ್ವೆಸ್ಟ್ ಕರ್ನಾಟಕ) ಎರಡನೇ ದಿನದಲ್ಲಿ "ಕ್ವಿನ್ ಸಿಟಿ ಹಾಗೂ ಆರೋಗ್ಯ ರಕ್ಷಣೆ ಕ್ಷೇತ್ರದ" ಚರ್ಚಾಗೋಷ್ಠಿಯಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದರು. ಬೆಂಗಳೂರಿನ ಸಮೀಪದಲ್ಲಿ 5,800 ಎಕರೆಗಳಲ್ಲಿ ಮೈದಳೆಯುತ್ತಿರುವ ಕ್ವಿನ್ ಸಿಟಿ, ವೈದ್ಯಕ...
ಮೈಕ್ರೋ ಫೈನಾನ್ಸ್‌ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಮೈಕ್ರೋ ಫೈನಾನ್ಸ್‌ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು. ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿ...
ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

Focus, Update Videos, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಪ್ರಾರಂಭವಾಗುತ್ತಿದ್ದಂತೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿದ್ದಾರೆ. ಭಕ್ತರು, ಸಂತರು ಮತ್ತು ಕಲ್ಪವಾಸಿಗಳನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿರುವ ಸಿಎಂ ಯೋಗಿ, ಮಹಾಕುಂಭ ಪ್ರತಿನಿಧಿಸುವ ನಂಬಿಕೆ ಮತ್ತು ಆಧುನಿಕತೆಯ ಸಂಗಮ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ 'X'ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, 'ಪೌಷ ಪೂರ್ಣಿಮೆಯ ಶುಭಾಶಯಗಳು. ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆ ‘ಮಹಾಕುಂಭ’ ಪವಿತ್ರ ನಗರವಾದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗುತ್ತಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಅನುಭವಿಸಲು, ಧ್ಯಾನ ಮಾಡಲು ಮತ್ತು ನಂಬಿಕೆ ಮತ್ತು ಆಧುನಿಕತೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಬಂದಿರುವ ಎಲ್ಲಾ ಪೂಜ್ಯ ಸಂತರು, ಕಲ್ಪವಾಸಿಗಳು ಮತ್ತು ಭಕ್ತರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲಾಗುತ್ತದೆ. ಗಂಗಾ ಮಾತೆ ನಿಮ್ಮ ಎಲ್ಲಾ ಆಸೆಗಳನ್ನು ಈಡೇರಿಸಲಿ' ಎಂದಿದ್ದಾರೆ. 'ಸನ...
ತುಮಕೂರಿನ ಓಬಳಾಪುರ ಗೇಟ್ ಬಳಿ ಅಪಘಾತ, ಮೂವರು ದುರ್ಮರಣ

ತುಮಕೂರಿನ ಓಬಳಾಪುರ ಗೇಟ್ ಬಳಿ ಅಪಘಾತ, ಮೂವರು ದುರ್ಮರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ತುಮಕೂರು: ತುಮಕೂರು ಸಮೀಪದ ಓಬಳಾಪುರ ಗೇಟ್ ಬಳಿ ಮಂಗಳವಾರ ಬೆಳಗಿನ ಜಾವ ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ಫ್ದಾರೆ. ತುಮಕೂರಿನಿಂದ ಮಧುಗಿರಿ ಕಡೆಗೆ ಹೋಗುವಾಗ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದವರಾಗಿದ್ದು ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಮೃತರನ್ನು ಶಾಖೀರ್ ಹುಸೇನ್ (48), ಮಮ್ತಾಜ್ (38) ಮಹ್ಮದ್ ಆಸೀಫ್ (12) ಇಂಡೈ ಗುರುತಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ತಿರುಪತಿ ಮಾದರಿಯಲ್ಲಿ ಧರ್ಮಸ್ಥಳದಲ್ಲೂ ಕ್ಯೂ ವ್ಯವಸ್ಥೆ; ಸುಸಜ್ಜಿತ ಸಂಕೀರ್ಣ ಹೇಗಿದೆ ಗೊತ್ತಾ?

ತಿರುಪತಿ ಮಾದರಿಯಲ್ಲಿ ಧರ್ಮಸ್ಥಳದಲ್ಲೂ ಕ್ಯೂ ವ್ಯವಸ್ಥೆ; ಸುಸಜ್ಜಿತ ಸಂಕೀರ್ಣ ಹೇಗಿದೆ ಗೊತ್ತಾ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನಿಮ್ಮ ಸುದ್ದಿ ಈಗ ಈ ಜನಪ್ರಿಯ ಸುದ್ದಿ ಮಾಧ್ಯಮದಲ್ಲಿ.. ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಉದ್ಘಾಟಿಸಲಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದ್ದು. ನೂತನ ಸಂಕೀರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಉದ್ಘಾಟಿಸಲಿದ್ದಾರೆ. 2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ… pic.twitter.com/pjq23dodQe — ಸನಾತನ (@sanatan_kannada) January 6, 2025  2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಸರದಿಯಲ್ಲಿ ...
‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ:“ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ್, ತಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆ ಎಂಬ ಸುದ್ದಿ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ ಎಂದರು. ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಸಿದ ಡಿಕೆಶಿ, ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದರು. ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀ...
ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸುದೀರ್ಘ ಕಾಲದ ಬೇಡಿಕೆಗಳನ್ನು ಮುಂದಿಟ್ಟು ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು 07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನು ರವಾನಿಸಿ, ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಸೇವೆ ಅನಿವಾರ್ಯ.. ಸುತ್ತೋಲೆಯಲ್ಲಿ ಏನಿದೆ? ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನ...
ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ

ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತಮ್ಮ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪಾರ್ಹ ವೀಡಿಯೊ ವೈರಲ್ ಮಾಡಿದೆ ಎಂದು ಪೊಲೀಸರಿಗೆ ದೂರು ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್, ತಮ್ಮ ಸ್ಥಾನಮಾನಕ್ಕೆ ಕಾಂಗ್ರೆಸ್ ಚ್ಯುತಿ ತರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ವಿಪಕ್ಷ ನಾಯಕ ಅಶೋಕ್ ಅವರಿಗೆ 'ವಿಶೇಷ ಸ್ಥಾನಮಾನದ ನಾಮಫಲಕ' ಒದಗಿಸಬೇಕಿದೆ ಎಂದು ವ್ಯಂಗ್ಯವಾಡಿದೆ. ಈ ಸಂಬಂಧ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್'ಗೆ ಬರೆದಿರುವ ಪತ್ರ ಗಮನಸೆಳೆದಿದೆ. ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅಲಿಯಾಸ್ ಸಾಮ್ರಾಟ್ ಅಶೋಕ್ ರವರಿಗೆ ವಿಶೇಷ ಸ್ಥಾನಮಾನ ಮತ್ತು ನಾಮಫಲಕ ಒದಗಿಸಬೇಕೆಂದು ಈ ಪತ್ರದಲ್ಲಿ ರಮೇಶ್ ಬಾಬು ಉಲ್ಲೇಖಿಸಿದ್ದಾರೆ. ಕರ್ನಾಟಕದ ವಿಧಾನಸಭೆಗೆ ತನ್ನದೇ ಆದ ವಿಶೇಷವಾದ ಗೌರವವಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅನೇಕ ಹಿರಿಯರು ಇಲ್ಲಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವಿರೋಧ ಪಕ್ಷದ ನಾಯಕರ ಸ್ಥಾನದ ಕಾರ್ಯದ ಕಾರಣಕ್ಕಾಗಿ ಗೌರವವನ್ನೂ ಪಡೆದಿರುತ್ತಾರೆ. ಹಿರಿಯ ನಾಯಕರಾದ ಏಸ್ . ಶಿವಪ್ಪನವರು ಮೊದಲ...
ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳದ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮದೇ ರೀತಿಯಲ್ಲಿ ಎದಿರೇಟು ನೀಡಿದ್ದಾರೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದರಲ್ಲೂ ಆರ್.ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಬಸ್‌ಗಳಲ್ಲಿನ ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ರಾಮಲಿಂಗ ರೆಡ್ಡಿ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಆಗಿನ ಬಿಜೆಪಿ ಸರ್ಕಾರವು 7 ಬಾರಿ ಟಿಕೆಟ್ ದರ ಪರಿಷ್ಕರಿತ್ತು. ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಿತ್ತು ಎಂದು ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ. ನಮ್ಮನ್ನು ಟೀಕಿಸುವ ಬಿಜೆಪಿಗೆ ಯಾವ ನೈತಿಕತೆಯೂ ಇಲ್ಲ, ನಾಚಿಕೆಯೂ ಇಲ್ಲ! ಎಂದು ಸಚಿವ ರಾಮಲಿಂಗ ರೆಡ್ಡಿ ಟೀಕಿಸಿದ್ದಾರೆ....