ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ
ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ.
ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರವರು ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಪಕ್ಷದ ದುರಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎನ್ನುವ...

