Tuesday, March 17

Tag: ಬಸನಗೌಡ ಪಟೀಲ್ ಯತ್ನಾಳ್

‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಿಗೆ ಬರೆದಿರುವ ಪತ್ರ ಗಮನಸೆಳೆದಿದೆ.ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ."ದೇಶದಾದ್ಯಂತ ರೈತರ, ದೇವಸ್ಥಾನಗಳ, ಟ್ರಸ್ಟ್‌ಗಳ ಮತ್ತು ಮಠಗಳ ಜಮೀನುಗಳ ಮೇಲೆ ವಕ್ಫ್ ಮಂಡಳಿಯು ಹಕ್ಕು ಸಾಧಿಸುತ್ತಿರುವುದು ವಿಷಾದದ ಸಂಗತಿ. ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು" -ಯತ್ನಾಳ್ ಆಗ್ರಹ.Karnataka BJP MLA Basanagouda R Patil writes a letter to PM Narendra Modi "I humbly request your esteemed office to consider nationalizing Waqf properties to ensure fair administration and to prevent further injustices. The Waqf Bo...
ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಬಳ್ಳಾರಿ ಚಲೋಗೆ ಬಿಜೆಪಿ ತಯಾರಿ ನಡೆಸಿದೆ.ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ತಯಾರಿ ನಡೆಸಿದ್ದು ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಅಕ್ರಮಗಳನ್ನು ಖಂಡಿಸಿ ಸದ್ಯದಲ್ಲೇ ಬಳ್ಳಾರಿಯಲ್ಲಿ ಈ ಬೃಹತ್ ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ.ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರು ಈ ಸಂಬಂಧ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿ ಭಾಗದ ಪ್ರಭಾವಿ ನಾಯಕ ಶ್ರೀರಾಮುಲು ಬೆಂಬಲಿಗರು ಕೂಡಾ ಬಳ್ಳಾರಿ ಚಲೋ ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.ಇದಕ್ಕೆ ಪೂರಕವೆಂಬಂತೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ತಮ್ಮಪಕ್ಷ ಉತ್ಸುಕವಾಗಿದೆ ಎಂದ...