Sunday, December 7

Tag: ಮುಂಬಯಿ ಕ್ರಿಕೆಟ್ ಎಸೋಸಿಯೇಶನ್‌ ಡಾ.ಪಿ.ವಿ.ಶೆಟ್ಟಿ

ಮುಂಬಯಿ ‘ಬಂಟ್ಸ್ ಪ್ರೀಮಿಯರ್ ಕ್ರಿಕೆಟ್ ಲೀಗ್’: ಯೂಥ್ ವಿಂಗ್ ಕಮಾಲ್ ಹೀಗಿತ್ತು..!

ಮುಂಬಯಿ ‘ಬಂಟ್ಸ್ ಪ್ರೀಮಿಯರ್ ಕ್ರಿಕೆಟ್ ಲೀಗ್’: ಯೂಥ್ ವಿಂಗ್ ಕಮಾಲ್ ಹೀಗಿತ್ತು..!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮುಂಬಯಿ: ಸಮಾಜ ಸಂಘಟನೆ, ಸಾಂಸ್ಕೃತಿಕ ಚಟುವಟಿಕೆ ಸಹಿತ ನಿರಂತರ ಚಟುವಟಿಕೆಗಳ ಮೂಲಕ ಗಮನಸೆಳೆಯುತ್ತಿರುವ ಮುಂಬಯಿಯ ಬಂಟರ ಸಂಘ' (Bunts Sangh Mumbai) ಯುವಜನರ ಅಭ್ಯುದಯ ಸಂಬಂಧ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಜೊತೆಯಲ್ಲೇ, ಬಂಟ್ಸ್ ಸಂಘ ಮುಂಬೈ - ಯೂಥ್ ವಿಂಗ್ ಆಯೋಜಿಸಿದ್ದ ಬಂಟ್ಸ್ ಪ್ರೀಮಿಯರ್ ಲೀಗ್ (Bunts Premier League) ಕ್ರಿಕೆಟ್ ಪಂದ್ಯಾವಳಿ ಜಿದ್ದಾಜಿದ್ದಿನ ಅಖಾಡಕ್ಕೆ ಸಾಕ್ಷಿಯಾಗಿತ್ತು. ನವಿ ಮುಂಬಯಿ ವಾಶಿಯ ಸೆಕ್ಟರ್ 1ರಲ್ಲಿರುವ ನವಿ ಮುಂಬಯಿ ಸ್ಪೋರ್ಟ್ಸ್ ಎಸೋಸಿಯೆಶನ್‌ ಮೈದಾನದಲ್ಲಿ ಈ 'ಬಂಟ್ಸ್ ಪ್ರೀಮಿಯರ್ ಲೀಗ್ 2025' ಆಯೋಜಿತವಾಗಿತ್ತು. ಮಾ.16ರಂದು ಬೆಳಿಗ್ಗೆ ಆರಂಭವಾದ ಪಂದ್ಯಾವಳಿಗಳಲ್ಲಿ ಬಂಟರ ಸಂಘದ 9 ಪ್ರಾದೇಶಿಕ ಸಮಿತಿಗಳು, ಮುಲುಂಡ್ ಬಂಟ್ಸ್, ಥಾಣೆ ಬಂಟ್ಸ್, ಬೋಂಬೆ ಬಂಟ್ಸ್ ಎಸೋಸಿಯೇಶನ್ ಸೇರಿದಂತೆ 12 ತಂಡಗಳು ಸೆಣಸಾಡಿದವು. ಅದರಲ್ಲೂ ವನಿತೆಯರ ವಿಭಾಗದ ಪಂದ್ಯಾವಳಿಗಳು ಭರ್ಜರಿ ಕಾದಾಟಕ್ಕೆ ಸಾಕ್ಷಿಯಾದವು.  ಡೊಂಬಿವಲಿ ಪ್ರಾದೇಶಿಕ ಸಮಿತಿ ತಂಡವು ಪುರುಷರ ವಿಭಾಗದಲ್ಲಿ ಚಾಂಪಿಯನ್'ಷಿಪ್ ಗೆದ್ದುಕೊಂಡರೆ, ಥಾಣೆ ಬಂಟ್ಸ್ (ರನ್ನರ್ ಅಪ್) ಪ...