Tuesday, March 24

Tag: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ಪಿ.ಜಿ.

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ಪರವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡಿದರೂ ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕು ವೇಣೂರು ಪೊಲೀಸ್ ಠಾಣೆಯಲ್ಲಿ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ ವಿರುದ್ಧ ಪ್ರಕರಣ ದಾಖಲಾಗಿದೆ.ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂದೇಶ್ ಅವರು​​​ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಇನ್ಸ್​ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಆರೋಪ ಎಂದಿದ್ದ ಕಮಿಷನರ್ ಸಂದೇಶ್ ವಿರುದ್ಧ ಕೆಲವು ಮಹಿಳೆಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಆರೋಪ ಸುಳ್ಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದರು. ಮುನ್ನವೇ, ಸಂತ್ರಸ್ತರ ಹೇಳಿಕೆ ದಾಖಲಿಸುವ ಮುನ್ನವೇ, ಪೊಲೀಸ್ ಆಯುಕ್ತರು ಇನ್ಸ್ಪೆಕ್ಟರ್'ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಸಾರ್ವಜನಿಕವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ಬೆನ್ನಲ್ಲೇ ಈ...