
UGCET-26: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ-2026) ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಸದ್ಯ ಫೆ.27 ಕೊನೆ ದಿನ. ಶುಲ್ಕ ಪಾವತಿಗೆ ಮಾರ್ಚ್ 3 ಕೊನೆ ದಿನ. ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಆದರೆ, ಅರ್ಜಿ ಸಲ್ಲಿಕೆಯ ದಿನಾಂಕದಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ ಎಂದವರ ಹೇಳಿಕೆಯನ್ನು KEA ತನ್ನ X ಖಾತೆಯಲ್ಲಿ ಹಂಚಿಕೊಂಡಿದೆ.
ಎಸ್ ಸಿ ಒಳಮೀಸಲಾತಿ RD ಕಡ್ಡಾಯ:
ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್ ಡಿ ಸಂಖ್ಯೆ ಇರುವ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಮುದ್ರಿತವಾಗಿರುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ಅರ್ಜಿಯ ಪೋರ್ಟಲ್ ನಲ್ಲಿ ಎಡಿಟಿಂಗ್ ಮಾಡುವ ಮೂಲಕ ಆರ್ ಡಿ ಸಂಖ್ಯೆಯನ್ನು ದಾಖಲಿಸಬೇಕು. ಇದಕ್ಕಾಗಿ ಎಡಿಟಿಂಗ್ ಅರ್ಜಿ ಪೋರ್ಟಲ್ ಅನ್ನು ಮಾರ್ಚ್ 30ರವರೆಗೆ ತೆರೆದಿರುತ್ತದೆ.
ಸದ್ಯ 40 ಸಾವಿರ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಕೇವಲ 20 ಸಾವಿರ ಅಭ್ಯರ್ಥಿಗಳು ಮಾತ್ರ ಒಳ ಮೀಸಲಾತಿ ಪ್ರಕಾರ ಪ್ರವರ್ಗಗಳ ಆರ್ ಡಿ ಸಂಖ್ಯೆಯನ್ನು ದಾಖಲಿಸಿದ್ದಾರೆ. ಇನ್ನೂ 20 ಸಾವಿರ ಮಂದಿ ಈ ಹಿಂದಿನ ಹಾಗೂ ಕೇವಲ ಪರಿಶಿಷ್ಟ ಜಾತಿ ಎಂದು ನಮೂದಾಗಿರುವ ಆರ್ ಡಿ ಸಂಖ್ಯೆ ನಮೂದಿಸಿದ್ದಾರೆ. ಹೀಗಾಗಿ ಇದುವರೆಗೂ ಒಳ ಮೀಸಲಾತಿ ಪ್ರಕಾರ ಪ್ರಮಾಣ ಪತ್ರ ಪಡೆಯದವರು ಈ ತಕ್ಷಣ ಪಡೆದು, ಹೊಸ ಆರ್ ಡಿ ಸಂಖ್ಯೆಯನ್ನು ಎಡಿಟ್ ಮಾಡುವುದರ ಮೂಲಕ ಸರಿ ಮಾಡಿಕೊಳ್ಳಬೇಕು. ಒಳ ಮೀಸಲಾತಿ ಪ್ರಕಾರ ಪ್ರವರ್ಗಗಳ ಆರ್ ಡಿ ಸಂಖ್ಯೆ ನಮೂದಿಸಿದವರನ್ನು ಮಾತ್ರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
#UGCET-26: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ-2026) ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಸದ್ಯ ಫೆ.27 ಕೊನೆ ದಿನ. ಶುಲ್ಕ ಪಾವತಿಗೆ ಮಾರ್ಚ್ 3 ಕೊನೆ ದಿನ. ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ… pic.twitter.com/x9XV7pGH8d
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) February 24, 2026
