
ಬೆಂಗಳೂರು: ಸಿಎಂ ಬದಲಾವಣೆ ಸಾಧ್ಯತೆಗಳ ಕುರಿತಂತೆ ರಾಜ್ಯ ರಾಕೀಯದಲ್ಲಿ ಬಲವಾದ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್ ನಡೆದಿದ್ದು, ಈ ಬೆಳವಣಿಗೆ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ.
ಆದರೆ, ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ. pic.twitter.com/pnZLbZDNTT
— Siddaramaiah (@siddaramaiah) January 3, 2025
