Saturday, June 27

ಯಲಹಂಕ: ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಬೆಂಗಳೂರು: ಇಬ್ಬರು ಮಕ್ಕಳೊಂದಿಗೆ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ‌ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ.

ಭಾನುವಾರ ರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅವಿನಾಶ್ (38), ಪತ್ನಿ ಮಮತಾ (30) ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಅವಿನಾಶ್ ಮೊದಲಿಗೆ ಮಕ್ಕಳು ಮತ್ತು ಪತ್ನಿಗೆ ವಿಷ ಕೊಟ್ಟು ಸಾಯಿಸಿ, ಆ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮೃತರು ಮೂಲತಃ ಕಲಬುರಗಿ ಜಿಲ್ಲೆಯವರಾಗಿದ್ದು, ಕಳೆದ ಐದು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ ಎನ್ನಲಾಗಿದೆ.

ಮೃತ ಅವಿನಾಶ ಸಹೋದರ ಉದಯ್ ಎಂಬಾತ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.