Wednesday, February 4

‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಆರೋಪವನ್ನು ಮುಂದಿಟ್ಟು ಬಿಜೆಪಿ ಶಾಸಕರು ಹೋರಾಟವನ್ನು ಮುಂದುವರಿಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ಶಾಸಕರು, ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟುಹಿಡಿದರು. ವಿಧಾನ ಪರಿಷತ್ ಸದಸ್ಯರೂ ಈ ಹೋರಾಟವನ್ನು ಬೆಂಬಲಿಸಿದ್ದು, ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿ ಗಮನಸೆಳೆದರು.