Thursday, January 29

ಕ್ರಿಪ್ಟೊ ಕರೆನ್ಸಿ ಹಗರಣ: ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

ನವದೆಹಲಿ: ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ಸಿಬಿಐ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಮಂಗಳವಾರ ಸಂಜೆಯವರೆಗೂ ಹಲವೆಡೆ ಶೋಧ ನಡೆದಿದೆ.

ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಕೈಗೊಂಡಿದೆ. ಬಹುಕೋಟಿ ರೂಪಾಯಿ ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.