Saturday, December 6

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ.

ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.