Saturday, December 6

ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ED ಮುಟ್ಟುಗೋಲು ವಿಚಾರ; ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಕೆಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಯತ್ನಿಸುತ್ತಿದ್ದು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಆರೋಪ ಪಟ್ಟಿ ಸಲ್ಲಿಕೆಗೆ ಮುಂದಾಗಿದೆ. ಈ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ಬೆಂಗಳೂರಿನ ಶಾಂತಿನಗರದ ವಿಲ್ಸನ್ ಗಾರ್ಡನ್ ನಲ್ಲಿರುವ ಇಡಿ ಕಚೇರಿ ಎದುರು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಮಾಜಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಮಂಜುನಾಥ್ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.