Sunday, December 7

ಪಾಕ್ ಪ್ರಜೆಗಳ ಅಕ್ರಮ ವಾಸ; ಬಂಧಿತರ ಸಂಖ್ಯೆ 22ಕ್ಕೆ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸುತ್ತಮುತ್ತ ಅಕ್ರಮವಾಗಿ ನೆಲೆಸಿರುವ ಪಾಕ್ ಪ್ರಜೆಗಳ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಬಂಧಿತರು ನೀಡಿದ ಹೇಳಿಕೆ ಆಧಾರಿಸಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು 14 ಮಂದಿ ಪಾಕಿಸ್ತಾನೀಯರನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಪಾಕ್ ಪ್ರಜೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.