Sunday, December 7

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್ ಆಗಲಿದೆ. ರಾತ್ರಿ ವೇಳೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ವಾಹನ ಸವಾರರಿಗೆ ಮಾಹಿತಿ ನೀಡಿದ್ದು, ಬುಧವಾರ ರಾತ್ರಿಯಿಂದಲೇ ಅನ್ವಯವಾಗುವಂತೆ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.