Wednesday, January 28

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರನ್ನು ಅರುಣ್, ಮನೋಜ್, ನರಸಿಂಹಮೂರ್ತಿ, ನಂದೀಶ್ ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆ ವೇಳೆ, ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ..