Saturday, December 6

ಮನು ಭಾಕರ್ ಸಹಿತ ನಾಲ್ವರು ಕ್ರೀಟಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದ ಮಹಿಳಾ ಶೂಟರ್ ಮನು ಭಾಕರ್ ಸಹಿತ ನಾಲ್ವರು ಅಪ್ರತಿಮ ಕ್ರೀಟಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿ ಪ್ರಕಟಿಸಿದೆ.

ವಿಶ್ವ ಚೆಸ್ ಚಾಂಪಿಯನ್​ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ 18 ವರ್ಷದ ಡಿ.ಗುಕೇಶ್ ಹಾಗೂ ಭಾರತದ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೂ ಕೇಂದ್ರ ಸರ್ಕಾರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ.

ರಾಷ್ಟ್ರಪತಿ ಭವನದಲ್ಲಿ ಈ ತಿಂಗಳ 17 ರಂದು ಈ ನಾಲ್ವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.