
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಹಗರಣ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ)ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ಗೆ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ED ನೊಟೀಸ್ ನೀಡಿತ್ತು. ಇದಕ್ಕೆ ತಡೆ ಕೋರಿ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಇಡಿ ನೀಡಿದ್ದ ಸಮನ್ಸ್ಗೆ ತಾತ್ಕಾಲಿಕ ತಡೆ ನೀಡಿದೆ.
