
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ D. K. ಶಿವಕುಮಾರ್ (D. K. Shivakumar) ಅವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 26ರಂದು ಇಬ್ಬರು ನಾಯಕರು ದೆಹಲಿಗೆ ತೆರಳಲಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹೇಳಿತ್ತು. ಈ ಹಿನ್ನೆಲೆ, ಈ ಬೆಳವಣಿಗೆ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳಿಂದ ಮುಖ್ಯಮಂತ್ರಿ ಸ್ಥಾನ ಹಸ್ತಾಂತರ ಕುರಿತಂತೆ ಶೀತಲ ಸಮರ ನಡೆಯುತ್ತಿರುವ ಬೆನ್ನಲ್ಲೇ, ಹೈಕಮಾಂಡ್ ಇದೀಗ ಈ ವಿಚಾರಕ್ಕೆ ಅಂತಿಮ ರೂಪ ನೀಡಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚೆ ನಡೆಸಲು ಸಿಎಂ ದೆಹಲಿಗೆ ತೆರಳುತ್ತಿರುವುದಾಗಿ ತಿಳಿದುಬಂದಿದೆ. ಈ ವೇಳೆ Rahul Gandhi ಅವರನ್ನು ಭೇಟಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಆದರೆ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಹಾಗೂ ರಾಜ್ಯ ಕಾಂಗ್ರೆಸ್ನ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತೂ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
